Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 11 ಏಪ್ರಿಲ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 11 ಏಪ್ರಿಲ್ 2027

ಭಾನುವಾರ · ಪಾಸ್ಕ ಕಾಲದ ಮೂರನೆಯ ವಾರ

ಹಬ್ಬಗಳು ಮತ್ತು ಸಂತರು

ಪಾಸ್ಕ ಕಾಲದ ಮೂರನೆಯ ಭಾನುವಾರ

ಭಾನುವಾರ · ಆರಾಧನಾ ಬಣ್ಣ: ಬಿಳಿ

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 3:13–15, 17–19

13ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ. 14ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ. 15ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು. 17“ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು. 18ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು. 19ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ

ಪ್ರತಿವಚನ ಕೀರ್ತನೆ

ಕೀರ್ತ 4:1, 6, 8

1ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು. 6“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು. 8ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.

ಎರಡನೆಯ ವಾಚನ

1 ಯೋಹಾ 2:1–5

1ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ. 2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ. 3ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ. 4ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ. 5ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.

ಸುವಾರ್ತೆ

ಲೂಕ 24:35–48

35ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು. 36ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು. 37ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು. 38ಆತನು ಅವರಿಗೆ, “ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ? 39ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು. 40ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು. 41ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು, 42ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು. 43ಆತನು ಅದನ್ನು ತೆಗೆದುಕೊಂಡು ಅವರ ಮುಂದೆ ತಿಂದನು. 44ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು. 45ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು. 46ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ, 47ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ. 48ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು