Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 11 ಏಪ್ರಿಲ್

ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 29 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 11 ಏಪ್ರಿಲ್ 2027

ಭಾನುವಾರ · ಸ್ವರ 4

ಹಬ್ಬಗಳು ಮತ್ತು ಸಂತರು

ಮಹಾ ಉಪವಾಸದ ನಾಲ್ಕನೆಯ ಭಾನುವಾರ

ಮಹಾ ಉಪವಾಸ ಕಾಲ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ಮೊದಲನೆಯ ಸುವಾರ್ತೆ

ಮತ್ತಾ 28:16–20

16ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು. 17ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು. 18ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. 19ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. 20ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.

ಪತ್ರಿಕೆ

ಇಬ್ರಿ 6:13–20

13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು, 14“ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ. 15ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು. 16ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು. 17ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು. 18ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು. 19ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ. 20ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.

ಪತ್ರಿಕೆ (ಸಂತ ಯೋಹಾನ)

ಎಫೆ 5:8–19

8ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ. 9ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ. 10ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ. 11ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ. 12ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ. 13ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ. 14ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ. 15ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ. 16ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ. 17ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ. 18ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು, 19ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.

ಸುವಾರ್ತೆ

ಮಾರ್ಕ 9:17–31

17ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ. 18ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು. 19ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು. 20ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು. 21ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ; 22ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು. 23ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು. 24ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು. 25ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು. 26ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು. 27ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು. 28ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು. 29ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು. 30ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು. 31ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.

ಸುವಾರ್ತೆ (ಸಂತ ಯೋಹಾನ)

ಮತ್ತಾ 4:25–5:12

25ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು. 5:1ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು. 2ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ, 3“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು. 4ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು. 5ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು. 6ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು. 7ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು. 8ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು. 9ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು. 10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು. 11“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. 12ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 29 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 11 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು