ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 12 ಏಪ್ರಿಲ್
ಆರ್ಥೊಡಾಕ್ಸ್ ಪಂಚಾಂಗ · ಮಾರ್ಚ್ 30 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 12 ಏಪ್ರಿಲ್ 2027
ಸೋಮವಾರ · ಮಹಾ ಉಪವಾಸದ ಐದನೆಯ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Venerable John Climacus of Sinai, Author of “the Ladder” († 649)
ಮಹಾ ಉಪವಾಸ ಕಾಲ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಆರನೆಯ ತಾಸು
33ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ. 34ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ. 35ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ. 36ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು. 37ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು. 38ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು. 38:1ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು. 2ಇದನ್ನು ಕೇಳಿದೊಡನೆ ಹಿಜ್ಕೀಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನನ್ನು ಪ್ರಾರ್ಥಿಸಿದನು. 3ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು. 4ಆಗ ಯೆಹೋವನು ಯೆಶಾಯನಿಗೆ, 5“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. 6ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು.
ಸಂಧ್ಯಾ ಪ್ರಾರ್ಥನೆ: ವಾಚನ
12ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು. 13ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು. 14ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು. 15ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು. 16ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು. 17ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು. 18ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.
ಸಂಧ್ಯಾ ಪ್ರಾರ್ಥನೆ: ವಾಚನ
27ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ. 28ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ. 29ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು. 30ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು. 31ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು. 32ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು. 33ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು. 34ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ. 35ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ. 15:1ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು. 2ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು. 3ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು. 4ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 30 ಮಾರ್ಚ್ ಎಂದರೆ ನಾಗರಿಕ ಪಂಚಾಂಗದ 12 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು