ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 14 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 14 ಏಪ್ರಿಲ್ 2027
ಬುಧವಾರ · ಪಾಸ್ಕ ಕಾಲದ ಮೂರನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಮೂರನೆಯ ವಾರದ ಬುಧವಾರ
ವಾರದ ದಿನ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
1ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು. 2ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. 3ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು. 4ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು. 5ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು. 6ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು. 7ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು. 8ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.
ಪ್ರತಿವಚನ ಕೀರ್ತನೆ
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ. ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ. 2ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ. 3ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು; 4ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. ಸೆಲಾ 5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ. 6ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ. 7ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ
ಸುವಾರ್ತೆ
35ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ ಬಾಯಾರಿಕೆಯಾಗುವುದಿಲ್ಲ. 36ಆದರೆ ನೀವು ನನ್ನನ್ನು ನೋಡಿದ್ದರೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ. 37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ. 38ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ. 39ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ. 40ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು