Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 16 ಏಪ್ರಿಲ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 16 ಏಪ್ರಿಲ್ 2027

ಶುಕ್ರವಾರ · ಪಾಸ್ಕ ಕಾಲದ ಮೂರನೆಯ ವಾರ

ಹಬ್ಬಗಳು ಮತ್ತು ಸಂತರು

ಪಾಸ್ಕ ಕಾಲದ ಮೂರನೆಯ ವಾರದ ಶುಕ್ರವಾರ

ವಾರದ ದಿನ · ಆರಾಧನಾ ಬಣ್ಣ: ಬಿಳಿ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 9:1–20

1ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ; 2ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು. 3ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು. 4ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು. 5ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು; 6ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು. 7ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು. 8ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು. 9ಅವನು ಮೂರು ದಿನಗಳು ಕಣ್ಣುಕಾಣದೆ, ಏನೂ ತಿನ್ನಲಿಲ್ಲ ಮತ್ತು ಏನೂ ಕುಡಿಯದೇ ಇದ್ದನು. 10ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು. 11ಕರ್ತನು ಅವನಿಗೆ, “ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ. 12ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ” ಎಂದು ಹೇಳಿದನು. 13ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ. 14ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು. 15ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ. 16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು. 17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು. 18ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು. 19ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು. 20ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.

ಪ್ರತಿವಚನ ಕೀರ್ತನೆ

ಕೀರ್ತ 117:1–2

1ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ. 2ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!

ಸುವಾರ್ತೆ

ಯೋಹಾ 6:52–59

52ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು. 53ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ. 54ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. 55ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ. 56ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ. 57ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು. 58ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು. 59ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು