ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 17 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 17 ಏಪ್ರಿಲ್ 2027
ಶನಿವಾರ · ಪಾಸ್ಕ ಕಾಲದ ಮೂರನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಮೂರನೆಯ ವಾರದ ಶನಿವಾರ
ವಾರದ ದಿನ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
31ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು. 32ಪೇತ್ರನು ಎಲ್ಲಾ ಕಡೆಗಳಲ್ಲಿಯೂ ಸಂಚಾರಮಾಡುತ್ತಿರುವಾಗ, ಲುದ್ದದಲ್ಲಿ ವಾಸವಾಗಿದ್ದ ದೇವಜನರ ಬಳಿಗೂ ಬಂದನು. 33ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರ್ಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು. 34ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು. 35ಮತ್ತು ಲುದ್ದದಲ್ಲಿಯೂ, ಶಾರೋನಿನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು. 36ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು. 37ಆ ಕಾಲದಲ್ಲಿ ಆಕೆ ರೋಗಕ್ಕೆ ತುತ್ತಾಗಿ ಸತ್ತಳು. ಆಕೆಯ ಶವವನ್ನು ಸ್ನಾನಮಾಡಿಸಿ ಮೇಲಂತಸ್ತಿನಲ್ಲಿಟ್ಟರು. 38ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, “ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು” ಬೇಡಿಕೊಂಡರು. 39ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು. 40ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು. 41ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು. 42ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.
ಪ್ರತಿವಚನ ಕೀರ್ತನೆ
12ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ? 13ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. 14ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. 15ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ. 16ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ. 17ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
ಸುವಾರ್ತೆ
60ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು. 61ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ? 62ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ? 63ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ. 64ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು. 65ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು. 66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು. 67ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ, 68ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ. 69ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು