ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 17 ಏಪ್ರಿಲ್
ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 4 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 17 ಏಪ್ರಿಲ್ 2027
ಶನಿವಾರ · ಮಹಾ ಉಪವಾಸದ ಐದನೆಯ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
ಅತಿಪವಿತ್ರ ದೇವಮಾತೆಯ ಅಕಾಥಿಸ್ಟ್ ಸ್ತೋತ್ರದ ಶನಿವಾರ
ಮಹಾ ಉಪವಾಸ ಕಾಲ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
24ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು. 25ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ. 26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು. 27ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ, 28ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
ಪತ್ರಿಕೆ (ದೇವಮಾತೆ)
1ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು. 2ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು. 3ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು. 4ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು. 5ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ. 6ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು. 7ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.
ಸುವಾರ್ತೆ
27ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು. 28ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು. 29ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು. 30ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು. 31ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
ಸುವಾರ್ತೆ (ದೇವಮಾತೆ)
38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. 41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. 11:27ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. 28ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 4 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 17 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು