ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 19 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 19 ಏಪ್ರಿಲ್ 2027
ಸೋಮವಾರ · ಪಾಸ್ಕ ಕಾಲದ ನಾಲ್ಕನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ನಾಲ್ಕನೆಯ ವಾರದ ಸೋಮವಾರ
ವಾರದ ದಿನ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
1ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು. 2ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿಮಾಡಿಸಿಕೊಂಡಿದ್ದ ಯೆಹೂದ್ಯರು; 3“ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ” ಎಂದು ಅವನ ಕೂಡ ವಾದಿಸಿದರು. 4ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ, 5ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು. 6ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು. 7ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು. 8ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು. 9ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು. 10ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು. 11ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು. 12ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು. 13ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; “ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು. 14ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು. 15ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು. 16ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು. 17ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು. 18ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
ಪ್ರತಿವಚನ ಕೀರ್ತನೆ
1ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ. 2ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ? 43:3ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ. 4ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
ಸುವಾರ್ತೆ
1“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ. 2ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು. 3ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ. 4ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ. 5ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ. 6ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ. 7ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ, 8ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. 9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು. 10ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು