Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 20 ಏಪ್ರಿಲ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 20 ಏಪ್ರಿಲ್ 2027

ಮಂಗಳವಾರ · ಪಾಸ್ಕ ಕಾಲದ ನಾಲ್ಕನೆಯ ವಾರ

ಹಬ್ಬಗಳು ಮತ್ತು ಸಂತರು

ಪಾಸ್ಕ ಕಾಲದ ನಾಲ್ಕನೆಯ ವಾರದ ಮಂಗಳವಾರ

ವಾರದ ದಿನ · ಆರಾಧನಾ ಬಣ್ಣ: ಬಿಳಿ

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 11:19–26

19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು. 20ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು. 21ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು. 22ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. 23ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು. 24ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು. 25ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. 26ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.

ಪ್ರತಿವಚನ ಕೀರ್ತನೆ

ಕೀರ್ತ 87:1–7

1ಕೋರಹೀಯರ ಕೀರ್ತನೆ; ಗೀತೆ. ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ. 2ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ. 3ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ, 4“ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ. 5ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು. 6ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ 7ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.

ಸುವಾರ್ತೆ

ಯೋಹಾ 10:22–30

22ಆನಂತರ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವು ನಡೆಯಿತು. ಅದು ಚಳಿಗಾಲವಾಗಿತ್ತು. 23ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ, 24ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು. 25ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ. 26ಆದರೂ, ನೀವು ನಂಬದೆ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ. 27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. 28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. 29ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು. 30ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು