ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 20 ಏಪ್ರಿಲ್
ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 7 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 20 ಏಪ್ರಿಲ್ 2027
ಮಂಗಳವಾರ · ಮಹಾ ಉಪವಾಸದ ಆರನೆಯ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Venerable George the Confessor, Metropolitan of Mitylene († after 820)
ಮಹಾ ಉಪವಾಸ ಕಾಲ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಆರನೆಯ ತಾಸು
6ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.” 7ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.” 8ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ. 9ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು. 10ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.
ಸಂಧ್ಯಾ ಪ್ರಾರ್ಥನೆ: ವಾಚನ
3ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು. 4ಹೀಗಿರುವುದರಿಂದ ಯಾಕೋಬನು ರಾಹೇಲಳನ್ನೂ, ಲೇಯಳನ್ನೂ, ತನ್ನ ಆಡುಕುರಿಗಳ ಹಿಂಡನ್ನು ಮೇಯಿಸುತ್ತಿದ್ದ ಅಡವಿಗೆ ಕರೆಕಳುಹಿಸಿ 5ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ. 6ನಾನು ನಿಮ್ಮ ತಂದೆಯ ಸೇವೆಯನ್ನು ಪೂರ್ಣಬಲದಿಂದ ಮಾಡಿದ್ದೇನೆ, ನೀವೂ ಅದನ್ನು ಬಲ್ಲಿರಿ. 7ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ. 8ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು ‘ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು. 9ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು, ಪಶುಪ್ರಾಣಿಗಳನ್ನು ಅವನಿಂದ ತೆಗೆದು ನನಗೆ ಕೊಟ್ಟನು. 10“ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು. 11ಆ ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ 12ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ. 13ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು. 14ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ? 15ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ. 16ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು” ಎಂದು ಉತ್ತರ ಕೊಟ್ಟರು.
ಸಂಧ್ಯಾ ಪ್ರಾರ್ಥನೆ: ವಾಚನ
3ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ. 4ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ. 5ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ. 6ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ. 7ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು. 8ದೋಷಿಯ ದಾರಿ ಡೊಂಕು; ಶುದ್ಧನ ನಡತೆ ಸರಳ. 9ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು. 10ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು. 11ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು. 12ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು. 13ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು. 14ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು. 15ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು. 16ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ. 17ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು. 18ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು. 19ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು. 20ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು. 21ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 7 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 20 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು