ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 21 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ಏಪ್ರಿಲ್ 2027
ಬುಧವಾರ · ಪಾಸ್ಕ ಕಾಲದ ನಾಲ್ಕನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ನಾಲ್ಕನೆಯ ವಾರದ ಬುಧವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಕ್ಯಾಂಟರ್ಬರಿಯ ಸಂತ ಆನ್ಸೆಲ್ಮ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
24ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂದಿತು. 25ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು. 13:1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ. 2ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು. 3ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು. 4ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು. 5ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
ಪ್ರತಿವಚನ ಕೀರ್ತನೆ
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ 2ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. 4ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ 5ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 7ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.
ಸುವಾರ್ತೆ
44ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ. 45ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ. 46ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ. 47ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ. 48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು. 49ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ. 50ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು.
ಇಂದಿನ ಸಂತರು
- ಕ್ಯಾಂಟರ್ಬರಿಯ ಸಂತ ಆನ್ಸೆಲ್ಮ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು