ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 22 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 22 ಏಪ್ರಿಲ್ 2027
ಗುರುವಾರ · ಪಾಸ್ಕ ಕಾಲದ ನಾಲ್ಕನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ನಾಲ್ಕನೆಯ ವಾರದ ಗುರುವಾರ
ವಾರದ ದಿನ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
13ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು. 14ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು. 15ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು. 16ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ; 17“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು. 18ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು, 19ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು. 20ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು. 21ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು. 22ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು. 23“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ. 24ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು. 25ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
ಪ್ರತಿವಚನ ಕೀರ್ತನೆ
1ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು. 2ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ. 20ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ. 21ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು. 24ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು. 26ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.
ಸುವಾರ್ತೆ
16ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ. 17ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು. 18ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ. 19ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ. 20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು