ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 23 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 23 ಏಪ್ರಿಲ್ 2027
ಶುಕ್ರವಾರ · ಪಾಸ್ಕ ಕಾಲದ ನಾಲ್ಕನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ನಾಲ್ಕನೆಯ ವಾರದ ಶುಕ್ರವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಸಂತ ಅಡಲ್ಬರ್ಟ್, ಧರ್ಮಾಧ್ಯಕ್ಷ ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ
ಸಂತ ಜಾರ್ಜ್, ಹುತಾತ್ಮ · ಐಚ್ಛಿಕ ಸ್ಮರಣೆ
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
26“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ. 27ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು. 28ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. 29ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು. 30“ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. 31ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ. 32“ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ; 33‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
ಪ್ರತಿವಚನ ಕೀರ್ತನೆ
6“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು. 7ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. 8ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು. 9ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು. 10ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ. 11ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.
ಸುವಾರ್ತೆ
1“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. 2ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! 3ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು. 4ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು. 5ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು, 6ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
ಇಂದಿನ ಸಂತರು
- ಸಂತ ಅಡಲ್ಬರ್ಟ್, ಧರ್ಮಾಧ್ಯಕ್ಷ ಮತ್ತು ಹುತಾತ್ಮ
- ಸಂತ ಜಾರ್ಜ್, ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು