Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 24 ಏಪ್ರಿಲ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 24 ಏಪ್ರಿಲ್ 2027

ಶನಿವಾರ · ಪಾಸ್ಕ ಕಾಲದ ನಾಲ್ಕನೆಯ ವಾರ

ಹಬ್ಬಗಳು ಮತ್ತು ಸಂತರು

ಪಾಸ್ಕ ಕಾಲದ ನಾಲ್ಕನೆಯ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಿಗ್ಮರಿಂಗನ್‌ನ ಸಂತ ಫಿದೆಲಿಸ್, ಧರ್ಮಗುರು ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 13:44–52

44ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು. 45ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು. 46ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. 47ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು. 48ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. 49ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು. 50ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು. 51ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು. 52ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.

ಪ್ರತಿವಚನ ಕೀರ್ತನೆ

ಕೀರ್ತ 98:1–4

1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 2ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. 3ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. 4ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.

ಸುವಾರ್ತೆ

ಯೋಹಾ 14:7–14

7ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು. 8ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು. 9ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ? 10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ. 11ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ. 12“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ. 13ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. 14ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು