ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 25 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 25 ಏಪ್ರಿಲ್ 2027
ಭಾನುವಾರ · ಪಾಸ್ಕ ಕಾಲದ ಐದನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಐದನೆಯ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
26ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು. 27ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು. 28ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು. 29ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು. 30ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು. 31ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.
ಪ್ರತಿವಚನ ಕೀರ್ತನೆ
25ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. 26ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ. 27ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು. 29ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು. 30ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು. 31ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.
ಎರಡನೆಯ ವಾಚನ
18ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು. 19ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ. 20ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು. 21ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ. 22ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು. 23ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ. 24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.
ಸುವಾರ್ತೆ
1“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು. 2ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ. 3ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ. 4ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. 5ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. 6ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ. 7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು. 8ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.
ಇಂದಿನ ಸಂತರು
- ಸಂತ ಮಾರ್ಕ, ಸುವಾರ್ತಿಕ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು