ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 26 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 26 ಏಪ್ರಿಲ್ 2027
ಸೋಮವಾರ · ಪಾಸ್ಕ ಕಾಲದ ಐದನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಐದನೆಯ ವಾರದ ಸೋಮವಾರ
ವಾರದ ದಿನ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
5ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ, 6ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ, 7ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು. 8ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು. 9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು; 10“ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು. 11ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು. 12ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು. 13ಊರ ಮುಂದಿದ್ದ ದ್ಯೌಸ್ ದೇವರ ಗುಡಿಯ ಪೂಜಾರಿಯು ಎತ್ತುಗಳನ್ನೂ, ಹೂವಿನ ಹಾರಗಳನ್ನೂ ಊರಬಾಗಿಲಿನ ಹತ್ತಿರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು. 14ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು; 15“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ. 16ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು. 17ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು. 18ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು. 2“ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು? 3ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ. 4ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. 15ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ. 16ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.
ಸುವಾರ್ತೆ
21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು. 22ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು. 23ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು. 24ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ. 25“ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ. 26ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು