ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 27 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 27 ಏಪ್ರಿಲ್ 2027
ಮಂಗಳವಾರ · ಪಾಸ್ಕ ಕಾಲದ ಐದನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಐದನೆಯ ವಾರದ ಮಂಗಳವಾರ
ವಾರದ ದಿನ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
19ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು. 20ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು. 21ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು. 22ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು. 23ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು. 24ತರುವಾಯ ಪಿಸಿದ್ಯ ಸೀಮೆಯನ್ನು ಹಾದು ಪಂಫುಲ್ಯ ಸೀಮೆಗೆ ಬಂದು, 25ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು. 26ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ. 27ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು. 28ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಹೆಚ್ಚುಕಾಲ ತಂಗಿದ್ದರು.
ಪ್ರತಿವಚನ ಕೀರ್ತನೆ
10ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು. 11ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು. 12ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು. 13ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು. 21ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.
ಸುವಾರ್ತೆ
27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ. 28ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು. 29ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ. 30ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. 31ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು