ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 28 ಏಪ್ರಿಲ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 28 ಏಪ್ರಿಲ್ 2027
ಬುಧವಾರ · ಪಾಸ್ಕ ಕಾಲದ ಐದನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಐದನೆಯ ವಾರದ ಬುಧವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಸಂತ ಲೂಯಿ ಗ್ರಿನ್ಯೋನ್ ಡಿ ಮೊಂಫೋರ್, ಧರ್ಮಗುರು · ಐಚ್ಛಿಕ ಸ್ಮರಣೆ
ಸಂತ ಪೀಟರ್ ಶನೆಲ್, ಧರ್ಮಗುರು ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು. 2ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು. 3ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು. 4ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು. 5ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು. 6ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;
ಪ್ರತಿವಚನ ಕೀರ್ತನೆ
1ಯಾತ್ರಾಗೀತೆ; ದಾವೀದನ ಕೀರ್ತನೆ. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು. 2ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ. 4ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ. 5ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.
ಸುವಾರ್ತೆ
1“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು. 2ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ. 3ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ. 4ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. 5ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. 6ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ. 7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು. 8ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.
ಇಂದಿನ ಸಂತರು
- ಸಂತ ಲೂಯಿ ಗ್ರಿನ್ಯೋನ್ ಡಿ ಮೊಂಫೋರ್, ಧರ್ಮಗುರು
- ಸಂತ ಪೀಟರ್ ಶನೆಲ್, ಧರ್ಮಗುರು ಮತ್ತು ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು