Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 29 ಏಪ್ರಿಲ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 29 ಏಪ್ರಿಲ್ 2027

ಗುರುವಾರ · ಪಾಸ್ಕ ಕಾಲದ ಐದನೆಯ ವಾರ

ಹಬ್ಬಗಳು ಮತ್ತು ಸಂತರು

ಪಾಸ್ಕ ಕಾಲದ ಐದನೆಯ ವಾರದ ಗುರುವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಿಯೆನಾದ ಸಂತ ಕ್ಯಾಥರೀನ್, ಕನ್ಯೆ ಮತ್ತು ಧರ್ಮಸಭೆಯ ಪಂಡಿತೆ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 15:7–21

7“ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ. 8ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು. 9ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು. 10ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ? 11ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು. 12ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು. 13ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ; 14“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ. 15ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ; 16“‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು. 17ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು 18ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ. 19“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು. 20ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು. 21ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.

ಪ್ರತಿವಚನ ಕೀರ್ತನೆ

ಕೀರ್ತ 96:1–3, 10

1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ. 2ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. 3ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ. 10ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.

ಸುವಾರ್ತೆ

ಯೋಹಾ 15:9–11

9“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ. 10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. 11ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು