ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಏಪ್ರಿಲ್ 2027 › 30 ಏಪ್ರಿಲ್
ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 17 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 30 ಏಪ್ರಿಲ್ 2027
ಶುಕ್ರವಾರ · ಪವಿತ್ರ ವಾರ
ಹಬ್ಬಗಳು ಮತ್ತು ಸಂತರು
ಮಹಾ ಪವಿತ್ರ ಶುಕ್ರವಾರ
ಮಹಾ ಉಪವಾಸ ಕಾಲ · ಕಟ್ಟುನಿಟ್ಟಿನ ಉಪವಾಸ
ಆಹಾರದಿಂದ ಸಂಪೂರ್ಣ ದೂರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಕಷ್ಟಾನುಭವದ ಮೊದಲನೆಯ ಸುವಾರ್ತೆ
31ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ. 32ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು ತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು. 33ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ. 34ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ. 35ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು. 36ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು. 37ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು. 38ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು. 14:1“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. 2ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! 3ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು. 4ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು. 5ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು, 6ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು. 7ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು. 8ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು. 9ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ? 10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ. 11ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ. 12“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ. 13ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. 14ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು. 15“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ. 16ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. 17ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು. 18“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ. 19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ. 20ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ. 21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು. 22ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು. 23ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು. 24ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ. 25“ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ. 26ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು. 27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ. 28ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು. 29ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ. 30ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. 31ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು. 15:1“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು. 2ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ. 3ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ. 4ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. 5ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. 6ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ. 7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು. 8ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ. 9“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ. 10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. 11ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ. 12ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ. 13ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ. 14ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು. 15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ. 16ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು. 17ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ. 18“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ. 19ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ. 20ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು. 21ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು. 22ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ. 23ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ. 24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ 25‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು. 26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು. 27ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ. 16:1“ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. 2ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ. 3ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು. 4ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ. 5“ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ. 6ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. 7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ. 8ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. 9ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ 10ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ, 11ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. 12“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ. 13ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು. 14ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದ ನನ್ನನ್ನೇ ಮಹಿಮೆಪಡಿಸುವನು. 15ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು. 16ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ” ಎಂದನು. 17ಇದನ್ನು ಕೇಳಿ ಆತನ ಶಿಷ್ಯರಲ್ಲಿ ಕೆಲವರು, “ಇದೇನು ಈತನು ಹೇಳುವ ಮಾತು? ‘ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ ಮತ್ತು ನಾನು ತಂದೆಯ ಬಳಿಗೆ ಹೋಗುತ್ತೇನೆ’ ಎನ್ನುತ್ತಾನಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು 18“‘ಸ್ವಲ್ಪ ಕಾಲವೆಂದು’ ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು. 19ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ? 20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವುದು. 21ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ. 22ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ. 23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. 24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು. 25“ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ. 26ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ. 27ನೀವು ನನ್ನನ್ನು ಪ್ರೀತಿಸಿ ನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. 28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು. 29ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ. 30ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು. 31ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ. 32ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ. 33ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು. 17:1ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು. 2ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. 3ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು. 4ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ. 5ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು. 6“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ. 7ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ. 8ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ. 9ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು. 10ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ. 11ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು. 12ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ. 13“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ. 14ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ. 15ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. 16ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ. 17ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ. 18ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ. 19ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. 20“ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ. 21ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. 22ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. 23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು. 24ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ. 25ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ. 26ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು. 18:1ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.
ಕಷ್ಟಾನುಭವದ ಎರಡನೆಯ ಸುವಾರ್ತೆ
1ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು. 2ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು. 3ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು. 4ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು. 5ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು. 6ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು. 7ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು. 8ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು. 9ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು. 10ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು. 11ಆಗ ಯೇಸು ಪೇತ್ರನಿಗೆ, “ಕತ್ತಿಯನ್ನು ಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು. 12ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು. 13ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು. 14ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು. 15ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು. 16ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು. 17ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು. 18ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು. 19ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು. 20ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ. 21ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು. 22ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು. 23ಯೇಸು ಅವನಿಗೆ “ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದು ಕೇಳಿದನು. 24ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು. 25ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು. 26ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?” ಎಂದನು. 27ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು. 28ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.
ಕಷ್ಟಾನುಭವದ ಮೂರನೆಯ ಸುವಾರ್ತೆ
57ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು. 58ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು. 59ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ. 60ಅನಂತರ ಇಬ್ಬರು ಮುಂದೆ ಬಂದು, 61“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು; 62ಆಗ ಮಹಾಯಾಜಕನು ಎದ್ದು ನಿಂತು, “ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?” ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು. 63ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು. 64ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು. 65ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ; 66ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು. 67ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು, 68“ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು. 69ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು. 70ಅವನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ” ಎಂದು ಎಲ್ಲರ ಮುಂದೆ ಹೇಳಿದನು. 71ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು. 72ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. 73ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು 74ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು. 75ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
ಕಷ್ಟಾನುಭವದ ನಾಲ್ಕನೆಯ ಸುವಾರ್ತೆ
28ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ. 29ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು. 30ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು. 31ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು. 32ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು. 33ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. 34ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು. 35ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ, 36ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು. 37ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು. 38ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ. 39ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು. 40ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು. 19:1ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು. 2ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ, 3ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು. 4ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು. 5ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು. 6ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು. 7ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು. 8ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು, 9ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ. 10ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು. 11ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು. 12ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು. 13ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು. 14ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು. 15ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು. 16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು.
ಕಷ್ಟಾನುಭವದ ಐದನೆಯ ಸುವಾರ್ತೆ
3ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು. 4“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು. 5ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು. 6ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು. 7ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು. 8ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ. 9ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ 10ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. 11ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು. 12ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ, 13ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು. 14ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು. 15ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು. 16ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು. 17ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು. 18ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು. 19ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು. 20ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು. 21ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು. 22ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು. 23ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು. 24ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು 25ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು. 26ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. 27ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು, 28ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ, 29ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ 30ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು. 31ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. 32ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.
ಕಷ್ಟಾನುಭವದ ಆರನೆಯ ಸುವಾರ್ತೆ
16ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು. 17ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು. 18ಅನಂತರ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು. 19ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. 20ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. 21ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು. 22ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ. 23ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ. 24ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು. 25ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು. 26“ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು. 27ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. 28ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ “ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ, 30ಶಿಲುಬೆಯಿಂದ ಇಳಿದು ನಿನ್ನನ್ನು ರಕ್ಷಿಸಿಕೋ” ಎಂದು ಆತನನ್ನು ಅಪಹಾಸ್ಯ ಮಾಡಿದರು. 31ಅದೇ ಮೇರೆಗೆ ಮುಖ್ಯಯಾಜಕರೂ ಶಾಸ್ತ್ರಿಗಳೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 32ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.
ಕಷ್ಟಾನುಭವದ ಏಳನೆಯ ಸುವಾರ್ತೆ
33ಅವರೆಲ್ಲರೂ ಗೊಲ್ಗೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ 34ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು. 35ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು; 36ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು. 37ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ. 38ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. 39ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ, 40“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು. 41ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 42ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು. 43ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು. 44ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು. 45ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. 46ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು. 47ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು. 48ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು. 49ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು. 50ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು. 51ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು; 52ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು; 53ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. 54ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
ಕಷ್ಟಾನುಭವದ ಎಂಟನೆಯ ಸುವಾರ್ತೆ
32ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು. 33ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು. 34ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು. 35ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು. 36ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ, 37“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು. 38ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು. 39ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು. 40ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ? 41ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ, 42“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು. 43ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು. 44ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು. 46ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. 47ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು. 48ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು. 49ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.
ಕಷ್ಟಾನುಭವದ 9ನೇ ಸುವಾರ್ತೆ
25ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು. 26ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು. 27ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು. 28ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು. 29ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು. 30ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು. 31ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು. 32ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು. 33ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. 34ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು. 35ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ. 36ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು. 37“ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.
ಕಷ್ಟಾನುಭವದ 10ನೇ ಸುವಾರ್ತೆ
43ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. 44ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು. 45ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು. 46ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು. 47ಮಗ್ದಲದ ಮರಿಯಳೂ ಮತ್ತು ಯೋಸೆಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು.
ಕಷ್ಟಾನುಭವದ 11ನೇ ಸುವಾರ್ತೆ
38ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು. 39ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು. 40ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು. 41ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ. 42ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು.
ಕಷ್ಟಾನುಭವದ 12ನೇ ಸುವಾರ್ತೆ
62ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು, 63“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು; 64ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು. 65ಪಿಲಾತನು ಅವರಿಗೆ, “ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ” ಎಂದು ಹೇಳಲು 66ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.
ಮೊದಲನೆಯ ತಾಸು
10ಆಗ ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು “ಕೃಪೆ” ಎಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು. ಆಗಲೇ ಮುರಿದುಹೋಯಿತು; 11ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು, ಇದು ಯೆಹೋವನ ನುಡಿ ಎಂದು ತಿಳಿದುಕೊಂಡವು. 12ಅನಂತರ ನಾನು ನಿಮಗೆ, “ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು. 13ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೆಕೆಲ್ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.
ಮೊದಲನೆಯ ತಾಸು (ಪತ್ರಿಕೆ)
14ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು. 15ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು. 16ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ. 17ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ. 18ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
ಮೊದಲನೆಯ ತಾಸು (ಸುವಾರ್ತೆ)
1ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು, 2ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು. 3ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು. 4“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು. 5ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು. 6ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು. 7ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು. 8ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ. 9ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ 10ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. 11ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು. 12ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ, 13ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು. 14ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು. 15ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು. 16ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು. 17ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು. 18ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು. 19ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು. 20ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು. 21ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು. 22ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು. 23ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು. 24ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು 25ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು. 26ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. 27ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು, 28ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ, 29ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ 30ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು. 31ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. 32ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು. 33ಅವರೆಲ್ಲರೂ ಗೊಲ್ಗೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ 34ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು. 35ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು; 36ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು. 37ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ. 38ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. 39ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ, 40“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು. 41ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 42ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು. 43ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು. 44ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು. 45ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. 46ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು. 47ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು. 48ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು. 49ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು. 50ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು. 51ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು; 52ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು; 53ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. 54ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು. 55ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು. 56ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.
ಮೂರನೆಯ ತಾಸು
4ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ. 5ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ. 6ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ. 7ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು. 8ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ. 9ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು. 10ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ. 11ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”
ಮೂರನೆಯ ತಾಸು (ಪತ್ರಿಕೆ)
6ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. 7ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು. 8ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ. 9ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? 10ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? 11ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.
ಮೂರನೆಯ ತಾಸು (ಸುವಾರ್ತೆ)
16ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು. 17ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು. 18ಅನಂತರ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು. 19ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. 20ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. 21ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು. 22ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ. 23ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ. 24ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು. 25ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು. 26“ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು. 27ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. 28ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ “ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ, 30ಶಿಲುಬೆಯಿಂದ ಇಳಿದು ನಿನ್ನನ್ನು ರಕ್ಷಿಸಿಕೋ” ಎಂದು ಆತನನ್ನು ಅಪಹಾಸ್ಯ ಮಾಡಿದರು. 31ಅದೇ ಮೇರೆಗೆ ಮುಖ್ಯಯಾಜಕರೂ ಶಾಸ್ತ್ರಿಗಳೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 32ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು. 33ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. 34ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು. 35ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ನೋಡಿರಿ, ಆತನು ಎಲೀಯನನ್ನು ಕರೆಯುತ್ತಾನೆ” ಅಂದರು. 36ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು. 37ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು. 38ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು. 39ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ದೇವಕುಮಾರನೇ” ಅಂದನು. 40ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.
ಆರನೆಯ ತಾಸು
13ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು. 14ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ, 15ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು. 53:1ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು? 2ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ. 3ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. 4ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು. 5ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು. 6ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು. 7ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ. 8ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು? 9ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು. 10ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು; 11ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು. 12ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು. 54:1“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.
ಆರನೆಯ ತಾಸು (ಇನ್ನೊಂದು ವಾಚನ)
9ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು. 10ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು. 11ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ. 12ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ.
ಆರನೆಯ ತಾಸು (ಪತ್ರಿಕೆ)
11ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ. 12“ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ, 13“ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ. 14ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, 15ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು. 16ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ. 17ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು. 18ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.
ಆರನೆಯ ತಾಸು (ಸುವಾರ್ತೆ)
32ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು. 33ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು. 34ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು. 35ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು. 36ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ, 37“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು. 38ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು. 39ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು. 40ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ? 41ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ, 42“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು. 43ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು. 44ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು. 46ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. 47ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು. 48ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು. 49ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.
9ನೇ ತಾಸು
18ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ. 19ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ. 20ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು. 21ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ. 22ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು. 23ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ. 12:1ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ? 2ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ. 3ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ. ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು. 4ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ. 5ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ? 9ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ, ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ. 10ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ. 11ಹೌದು, ಹಾಳುಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾರೂ ಗಮನಿಸದೆ ಇರುವುದರಿಂದ ದೇಶವೆಲ್ಲಾ ಹಾಳುಬಿದ್ದಿದೆ. 14ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು. 15ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.
9ನೇ ತಾಸು (ಪತ್ರಿಕೆ)
19ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ. 21ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ. 22ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ. 23ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು. 24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ. 25ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ. 26ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. 27ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು. 28ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ. 29ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ? 30“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ. 31ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
9ನೇ ತಾಸು (ಸುವಾರ್ತೆ)
28ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ. 29ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು. 30ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು. 31ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು. 32ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು. 33ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. 34ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು. 35ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ, 36ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು. 37ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು. 38ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ. 39ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು. 40ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು. 19:1ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು. 2ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ, 3ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು. 4ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು. 5ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು. 6ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು. 7ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು. 8ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು, 9ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ. 10ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು. 11ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು. 12ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು. 13ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು. 14ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು. 15ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು. 16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು. 17ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ. 18ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು. 19ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು. 20ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು. 21ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು. 22ಅದಕ್ಕೆ ಪಿಲಾತನು, “ನಾನು ಬರೆದದ್ದು ಬರೆದಾಯಿತು” ಎಂದು ಉತ್ತರ ಕೊಟ್ಟನು. 23ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು. 24ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು. 25ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು. 26ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು. 27ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು. 28ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು. 29ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು. 30ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು. 31ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು. 32ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು. 33ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. 34ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು. 35ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ. 36ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು. 37“ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.
ಸಂಧ್ಯಾ ಪ್ರಾರ್ಥನೆ: ವಾಚನ
11ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ. 12ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ. 13ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು. 14ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು. 15ಮೋಶೆಯು ಆತನಿಗೆ, “ನಿನ್ನ ಪ್ರಸನ್ನತೆಯು ನಮ್ಮ ಸಂಗಡ ಬಾರದೇ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬೇಡ. 16ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು. 17ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು. 18ಅದಕ್ಕೆ ಮೋಶೆಯು, “ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು” ಎಂದು ಕೇಳಿದನು. 19ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು. 20ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು. 21ಮತ್ತು ಯೆಹೋವನು ಅವನಿಗೆ, “ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು. 22ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು. 23ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ” ಎಂದು ಯೆಹೋವನು ಆಜ್ಞಾಪಿಸಿದನು.
ಸಂಧ್ಯಾ ಪ್ರಾರ್ಥನೆ: ವಾಚನ
12ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು. 13ಇಷ್ಟು ಮಾತ್ರವಲ್ಲದೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು. 14ಮೊದಲನೆಯವಳಿಗೆ ಯೆಮೀಮ, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ಹಪ್ಪೂಕ್ ಎಂದು ಹೆಸರಿಟ್ಟನು. 15ಯೋಬನ ಮಕ್ಕಳಷ್ಟು ಸುಂದರಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವತ್ತನ್ನು ಹಂಚಿದನು. 16ಆ ಮೇಲೆ ಯೋಬನು ನೂರನಲ್ವತ್ತು ವರ್ಷ ಬಾಳಿ ತನ್ನ ಮಕ್ಕಳನ್ನು, ಮೊಮ್ಮಕ್ಕಳನ್ನು ಅಂತು ತನ್ನ ಸಂತಾನದ ನಾಲ್ಕು ತಲೆಗಳನ್ನು ಕಂಡನು. 17ತರುವಾಯ ಯೋಬನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು.
ಸಂಧ್ಯಾ ಪ್ರಾರ್ಥನೆ: ವಾಚನ
13ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು. 14ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ, 15ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು. 53:1ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು? 2ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ. 3ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. 4ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು. 5ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು. 6ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು. 7ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ. 8ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು? 9ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು. 10ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು; 11ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು. 12ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು. 54:1“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.
ಪತ್ರಿಕೆ (ಸಂಧ್ಯಾ ಪ್ರಾರ್ಥನೆಯಲ್ಲಿ)
18ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ. 19“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ. 20ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ? 21ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು. 22ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; 23ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ. 24ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ. 25ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ. 26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ. 27ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು. 28ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ. 29ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ. 30ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ. 31“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು. 2:1ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ. 2ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.
ಸುವಾರ್ತೆ (ಜೋಡಿಸಿದ ವಾಚನ)
ಮತ್ತಾ 27:1–38 · ಲೂಕ 23:39–43 · ಮತ್ತಾ 27:39–54 · ಯೋಹಾ 19:31–37 · ಮತ್ತಾ 27:55–61
1ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು, 2ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು. 3ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು. 4“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು. 5ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು. 6ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು. 7ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು. 8ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ. 9ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ 10ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. 11ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು. 12ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ, 13ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು. 14ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು. 15ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು. 16ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು. 17ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು. 18ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು. 19ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು. 20ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು. 21ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು. 22ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು. 23ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು. 24ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು 25ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು. 26ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. 27ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು, 28ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ, 29ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ 30ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು. 31ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. 32ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು. 33ಅವರೆಲ್ಲರೂ ಗೊಲ್ಗೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ 34ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು. 35ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು; 36ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು. 37ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ. 38ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. 23:39ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು. 40ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ? 41ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ, 42“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು. 43ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು. 27:39ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ, 40“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು. 41ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 42ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು. 43ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು. 44ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು. 45ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. 46ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು. 47ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು. 48ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು. 49ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು. 50ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು. 51ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು; 52ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು; 53ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. 54ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು. 19:31ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು. 32ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು. 33ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. 34ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು. 35ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ. 36ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು. 37“ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ. 27:55ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು. 56ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು. 57ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು. 58ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು. 59ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ 60ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು. 61ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 17 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 30 ಏಪ್ರಿಲ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು