ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 1 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 1 ಮೇ 2027
ಶನಿವಾರ · ಪಾಸ್ಕ ಕಾಲದ ಐದನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಐದನೆಯ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಕಾರ್ಮಿಕ ಸಂತ ಯೋಸೇಫ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು. 2ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು. 3ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು. 4ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು. 5ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು. 6ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ, 7ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ. 8ಆಗ ಅವರು ಮೂಸ್ಯದ ಮುಖಾಂತಾರವಾಗಿ ತ್ರೋವಕ್ಕೆ ಬಂದರು. 9ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು. 10ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.
ಪ್ರತಿವಚನ ಕೀರ್ತನೆ
1ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. 2ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. 3ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. 5ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
ಸುವಾರ್ತೆ
18“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ. 19ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ. 20ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು. 21ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.
ಇಂದಿನ ಸಂತರು
- ಕಾರ್ಮಿಕ ಸಂತ ಯೋಸೇಫ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು