Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 2 ಮೇ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 2 ಮೇ 2027

ಭಾನುವಾರ · ಪಾಸ್ಕ ಕಾಲದ ಆರನೆಯ ವಾರ

ಹಬ್ಬಗಳು ಮತ್ತು ಸಂತರು

ಪಾಸ್ಕ ಕಾಲದ ಆರನೆಯ ಭಾನುವಾರ

ಭಾನುವಾರ · ಆರಾಧನಾ ಬಣ್ಣ: ಬಿಳಿ

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 10:25–26, 34–35, 44–48

25ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು. 26ಆದರೆ ಪೇತ್ರನು; “ಏಳು, ನಾನೂ ಸಹಾ ಮನುಷ್ಯನೇ” ಎಂದು ಹೇಳಿ, ಅವನನ್ನು ಎತ್ತಿ, 34ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ, 35ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ. 44ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು. 45ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ, 46ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. 47ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ, 48ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.

ಪ್ರತಿವಚನ ಕೀರ್ತನೆ

ಕೀರ್ತ 98:1–4

1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 2ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. 3ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. 4ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.

ಎರಡನೆಯ ವಾಚನ

1 ಯೋಹಾ 4:7–10

7ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. 8ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ. 9ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ. 10ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.

ಸುವಾರ್ತೆ

ಯೋಹಾ 15:9–17

9“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ. 10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. 11ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ. 12ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ. 13ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ. 14ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು. 15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ. 16ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು. 17ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು