Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 2 ಮೇ

ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 19 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ಮೇ 2027

ಭಾನುವಾರ · ಸ್ವರ 1

ಹಬ್ಬಗಳು ಮತ್ತು ಸಂತರು

ಪವಿತ್ರ ಪಾಸ್ಕ

ನಮ್ಮ ಕರ್ತನೂ ರಕ್ಷಕನೂ ಆದ ಯೇಸು ಕ್ರಿಸ್ತನ ಪುನರುತ್ಥಾನ

ಉಪವಾಸವಿಲ್ಲದ ವಾರ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 1:1–8

1ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು, 2ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ. 3ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು. 4ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ, 5ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು. 6ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು 7ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ. 8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.

ಸುವಾರ್ತೆ

ಯೋಹಾ 1:1–17

1ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು. 2ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು. 3ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ. 4ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು. 5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ. 6ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು. 7ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು. 8ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು. 9ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು. 10ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ. 11ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ. 12ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. 13ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು. 14ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು. 15ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು. 16ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು. 17ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.

ಸಂಧ್ಯಾ ಪ್ರಾರ್ಥನೆ: ಸುವಾರ್ತೆ

ಯೋಹಾ 20:19–25

19ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು. 20ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. 21ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು. 22ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ. 23ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು. 24ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ. 25ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 19 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 2 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು