Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 3 ಮೇ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 3 ಮೇ 2027

ಸೋಮವಾರ · ಪಾಸ್ಕ ಕಾಲದ ಆರನೆಯ ವಾರ

ಹಬ್ಬಗಳು ಮತ್ತು ಸಂತರು

ಸಂತರಾದ ಫಿಲಿಪ್ಪ ಮತ್ತು ಯಾಕೋಬ, ಅಪೊಸ್ತಲರು

ಹಬ್ಬ · ಆರಾಧನಾ ಬಣ್ಣ: ಕೆಂಪು

ದಿನದ ವಾಚನಗಳು

ಮೊದಲನೆಯ ವಾಚನ

1 ಕೊರಿ 15:1–8

1ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ. 2ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ. 3ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; 4ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು. 5ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು. 6ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ. 7ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ ಅಪೊಸ್ತಲರಿಗೂ ಕಾಣಿಸಿಕೊಂಡನು. 8ಕಟ್ಟಕಡೆಗೆ, ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು.

ಪ್ರತಿವಚನ ಕೀರ್ತನೆ

ಕೀರ್ತ 19:1–4

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ. 2ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು. 3ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ. 4ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.

ಸುವಾರ್ತೆ

ಯೋಹಾ 14:6–14

6ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು. 7ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು. 8ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು. 9ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ? 10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ. 11ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ. 12“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ. 13ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. 14ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು