Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 3 ಮೇ

ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 20 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 3 ಮೇ 2027

ಸೋಮವಾರ · ಉಜ್ವಲ ವಾರ · ಸ್ವರ 2

ಹಬ್ಬಗಳು ಮತ್ತು ಸಂತರು

ಉಜ್ವಲ ವಾರದ ಸೋಮವಾರ

ಉಪವಾಸವಿಲ್ಲದ ವಾರ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 1:12–17, 21–26

12ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು. 13ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ. 14ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. 15ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು, 16“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು. 17ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.” 21ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು 23ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ, 24“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು. 26ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

ಸುವಾರ್ತೆ

ಯೋಹಾ 1:18–28

18ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ. 19ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ, 20ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು. 21ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು. 22ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು. 23ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು. 24ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು. 25ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು. 26ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ. 27ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು. 28ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 3 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು