Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 5 ಮೇ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 5 ಮೇ 2027

ಬುಧವಾರ · ಪಾಸ್ಕ ಕಾಲದ ಆರನೆಯ ವಾರ

ಹಬ್ಬಗಳು ಮತ್ತು ಸಂತರು

ಪಾಸ್ಕ ಕಾಲದ ಆರನೆಯ ವಾರದ ಬುಧವಾರ

ವಾರದ ದಿನ · ಆರಾಧನಾ ಬಣ್ಣ: ಬಿಳಿ

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 17:15, 22–18:1

15ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು. 22ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ. 23ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು. 24“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ; 25ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ. 26ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ, 27ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ. 28ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ. 29“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು. 30ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ. 31ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು. 32ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು. 33ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು. 34ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು. 18:1ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.

ಪ್ರತಿವಚನ ಕೀರ್ತನೆ

ಕೀರ್ತ 148:1–2, 11–14

1ಯೆಹೋವನಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ, ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ. 2ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ. 11ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು, 12ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು 13ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ. 14ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!

ಸುವಾರ್ತೆ

ಯೋಹಾ 16:12–15

12“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ. 13ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು. 14ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದ ನನ್ನನ್ನೇ ಮಹಿಮೆಪಡಿಸುವನು. 15ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು