ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 5 ಮೇ
ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 22 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 5 ಮೇ 2027
ಬುಧವಾರ · ಉಜ್ವಲ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
ಉಜ್ವಲ ವಾರದ ಬುಧವಾರ
ಉಪವಾಸವಿಲ್ಲದ ವಾರ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
22“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು. 23ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ. 24ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು. 25ಆತನ ವಿಷಯದಲ್ಲಿ ದಾವೀದನು;, “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. 26ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು; 27ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. 28ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ. 29“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ. 30ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು. 31ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು. 32ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ. 33ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ. 34ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ. 36“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
ಸುವಾರ್ತೆ
35ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು, 36ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು. 37ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು. 38ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು. 39ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು. 40ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು. 41ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ, 42ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ) 43ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು. 44ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು. 45ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು. 46ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು. 47ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು. 48ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು. 49ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು. 50ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು. 51ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 22 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 5 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು