Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 7 ಮೇ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 7 ಮೇ 2027

ಶುಕ್ರವಾರ · ಪಾಸ್ಕ ಕಾಲದ ಆರನೆಯ ವಾರ

ಹಬ್ಬಗಳು ಮತ್ತು ಸಂತರು

ಪಾಸ್ಕ ಕಾಲದ ಆರನೆಯ ವಾರದ ಶುಕ್ರವಾರ

ವಾರದ ದಿನ · ಆರಾಧನಾ ಬಣ್ಣ: ಬಿಳಿ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 18:9–18

9ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು, 10ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು. 11ಅವನು ಒಂದು ವರ್ಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು. 12ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು; 13“ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು. 14ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ. 15ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ, 16ಅವರನ್ನು ನ್ಯಾಯಾಸ್ಥಾನದ ಸ್ಥಳದಿಂದ ಹೊರಡಿಸಿಬಿಟ್ಟನು. 17ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ. 18ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.

ಪ್ರತಿವಚನ ಕೀರ್ತನೆ

ಕೀರ್ತ 47:1–6

1ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. 2ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. 3ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ. 4ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ 5ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. 6ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.

ಸುವಾರ್ತೆ

ಯೋಹಾ 16:20–23

20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವುದು. 21ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ. 22ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ. 23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು