Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 7 ಮೇ

ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 24 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 7 ಮೇ 2027

ಶುಕ್ರವಾರ · ಉಜ್ವಲ ವಾರ · ಸ್ವರ 6

ಹಬ್ಬಗಳು ಮತ್ತು ಸಂತರು

ಉಜ್ವಲ ವಾರದ ಶುಕ್ರವಾರ

ಅತಿಪವಿತ್ರ ದೇವಮಾತೆಯ ಜೀವದಾಯಕ ಬುಗ್ಗೆ

ಉಪವಾಸವಿಲ್ಲದ ವಾರ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 3:1–8

1ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು. 2ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು. 3ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು. 4ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು. 5ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು. 6ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ, 7ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು. 8ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.

ಪತ್ರಿಕೆ (ದೇವಮಾತೆ)

ಫಿಲಿಪ್ಪಿ 2:5–11

5ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. 6ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ, 7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು. 8ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. 9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. 10ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು, 11ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.

ಸುವಾರ್ತೆ

ಯೋಹಾ 2:12–22

12ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು. 13ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು. 14ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು. 15ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು. 16ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು. 17ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು. 18ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು. 19ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು. 20ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು. 21ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು. 22ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.

ಸುವಾರ್ತೆ (ದೇವಮಾತೆ)

ಲೂಕ 10:38–42; 11:27–28

38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. 41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. 11:27ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. 28ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 24 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 7 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು