ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 8 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ಮೇ 2027
ಶನಿವಾರ · ಪಾಸ್ಕ ಕಾಲದ ಆರನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಆರನೆಯ ವಾರದ ಶನಿವಾರ
ವಾರದ ದಿನ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
23ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು. 24ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು. 25ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು. 26ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು. 27ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು. 28ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.
ಪ್ರತಿವಚನ ಕೀರ್ತನೆ
1ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. 2ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. 7ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. 8ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ. 9ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.
ಸುವಾರ್ತೆ
23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. 24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು. 25“ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ. 26ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ. 27ನೀವು ನನ್ನನ್ನು ಪ್ರೀತಿಸಿ ನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. 28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು