ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 10 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 10 ಮೇ 2027
ಸೋಮವಾರ · ಪಾಸ್ಕ ಕಾಲದ ಏಳನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಏಳನೆಯ ವಾರದ ಸೋಮವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಆವಿಲಾದ ಸಂತ ಜಾನ್, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು; 2“ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು. 3ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು. 4ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು, 5ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. 6ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು. 7ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು. 8ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
ಪ್ರತಿವಚನ ಕೀರ್ತನೆ
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ದಾವೀದನ ಕೀರ್ತನೆ; ಹಾಡು. ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ; ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ. 2ಹೊಗೆಯು ಗಾಳಿಯಿಂದ ಹೇಗೋ, ಹಾಗೆ ಅವರು ಆತನಿಂದ ಹಾರಿಹೋಗಲಿ; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ, ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗಲಿ. 3ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಉಲ್ಲಾಸಿಸಲಿ, ಆನಂದಧ್ವನಿಮಾಡಲಿ. 4ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ. 5ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ. 6ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.
ಸುವಾರ್ತೆ
29ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ. 30ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು. 31ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ. 32ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ. 33ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.
ಇಂದಿನ ಸಂತರು
- ಆವಿಲಾದ ಸಂತ ಜಾನ್, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು