ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 10 ಮೇ
ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 27 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ಮೇ 2027
ಸೋಮವಾರ · ಪಾಸ್ಕದ ಎರಡನೆಯ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Apostle and Hieromartyr Simeon, Bishop of Jerusalem, a Kinsman of the Lord († 107)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
19ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ 20ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು. 21ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ. 22ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು. 23ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ. 24ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು. 25ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ. 26ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.
ಸುವಾರ್ತೆ
1ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು. 2ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು. 3ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು. 4ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು. 5ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು. 6ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು. 7ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು. 8ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು. 9ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, 10“ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು. 11ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 27 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 10 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು