ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 11 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 11 ಮೇ 2027
ಮಂಗಳವಾರ · ಪಾಸ್ಕ ಕಾಲದ ಏಳನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಏಳನೆಯ ವಾರದ ಮಂಗಳವಾರ
ವಾರದ ದಿನ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು. 18ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ. 19ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ. 20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ 21ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ. 22ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು. 23ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು. 24ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ. 25ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು. 26ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ. 27ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.
ಪ್ರತಿವಚನ ಕೀರ್ತನೆ
9ದೇವರೇ, ನೀನು ಹೇರಳವಾಗಿ ಮಳೆಸುರಿಸಿ, ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ. 10ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು. ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ. 19ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ 20ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.
ಸುವಾರ್ತೆ
1ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು. 2ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. 3ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು. 4ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ. 5ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು. 6“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ. 7ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ. 8ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ. 9ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು. 10ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ. 11ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು