Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 11 ಮೇ

ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 28 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 11 ಮೇ 2027

ಮಂಗಳವಾರ · ಪಾಸ್ಕದ ಎರಡನೆಯ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

ಸಂತೋಷದ ದಿನ (ರಾದೊನಿತ್ಸಾ)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 4:1–10

1ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು. 2ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು. 3ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು. 4ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು. 5ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು. 6ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು. 7ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು, 8ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ, 9ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ. 10ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.

ಸುವಾರ್ತೆ

ಯೋಹಾ 3:16–21

16“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. 17ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ. 18ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. 19ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು. 20ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ. 21ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 28 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 11 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು