Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 12 ಮೇ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 12 ಮೇ 2027

ಬುಧವಾರ · ಪಾಸ್ಕ ಕಾಲದ ಏಳನೆಯ ವಾರ

ಹಬ್ಬಗಳು ಮತ್ತು ಸಂತರು

ಪಾಸ್ಕ ಕಾಲದ ಏಳನೆಯ ವಾರದ ಬುಧವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ಪಂಕ್ರಾಸ್, ಹುತಾತ್ಮ · ಐಚ್ಛಿಕ ಸ್ಮರಣೆ

ಸಂತರಾದ ನೆರೆಯಸ್ ಮತ್ತು ಅಖಿಲೆಯಸ್, ಹುತಾತ್ಮರು · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 20:28–38

28ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. 29ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ. 30ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು. 31ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ. 32ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ. 33ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ. 34ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ. 35ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು. 36ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು. 37ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. 38ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.

ಪ್ರತಿವಚನ ಕೀರ್ತನೆ

ಕೀರ್ತ 68:28–29, 32–35

28ದೇವರೇ, ನಿನ್ನ ಪ್ರತಾಪವನ್ನು ಆಜ್ಞಾಪಿಸು. ನಿನ್ನ ಮಂದಿರದಲ್ಲಿ ಆಸೀನನಾಗಿ ನಮಗೋಸ್ಕರ ಮಹತ್ಕಾರ್ಯಗಳನ್ನು ನಡೆಸಿದ ದೇವರೇ, ನಿನ್ನ ಬಲವನ್ನು ಪ್ರಕಟಿಸು. 29ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ. 32ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ 33ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು. 34ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ. 35ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.

ಸುವಾರ್ತೆ

ಯೋಹಾ 17:11–19

11ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು. 12ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ. 13“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ. 14ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ. 15ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. 16ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ. 17ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ. 18ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ. 19ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು