ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 12 ಮೇ
ಆರ್ಥೊಡಾಕ್ಸ್ ಪಂಚಾಂಗ · ಏಪ್ರಿಲ್ 29 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 12 ಮೇ 2027
ಬುಧವಾರ · ಪಾಸ್ಕದ ಎರಡನೆಯ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Nine Holy Martyrs of Cyzicus: Theognidus, Rufus, Antipater, Theostichus, Artemas, Magnus, Theodotus, Thaumasius, and Philemon († 286-299)
ಉಪವಾಸದ ದಿನ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
13ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು. 14ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು. 15ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,, 16“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ. 17ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.” 18ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು. 19ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ; 20ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು. 21ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು. 22ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
ಸುವಾರ್ತೆ
17ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು. 18ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು. 19ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ. 20ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು. 21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ. 22ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ. 23ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು. 24ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 29 ಏಪ್ರಿಲ್ ಎಂದರೆ ನಾಗರಿಕ ಪಂಚಾಂಗದ 12 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು