ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 13 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 13 ಮೇ 2027
ಗುರುವಾರ · ಪಾಸ್ಕ ಕಾಲದ ಏಳನೆಯ ವಾರ
ಹಬ್ಬಗಳು ಮತ್ತು ಸಂತರು
ಪಾಸ್ಕ ಕಾಲದ ಏಳನೆಯ ವಾರದ ಗುರುವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಫಾತಿಮಾ ಮಾತೆ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
30ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು. 23:6ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು. 7ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು. 8ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು. 9ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು. 10ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು. 11ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.
ಪ್ರತಿವಚನ ಕೀರ್ತನೆ
1ದಾವೀದನ ಕಾವ್ಯ. ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು. 2ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು. 5ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. 7ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ. 8ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ. 9ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು. 10ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. 11ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
ಸುವಾರ್ತೆ
20“ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ. 21ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. 22ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. 23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು. 24ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ. 25ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ. 26ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು