Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 14 ಮೇ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 14 ಮೇ 2027

ಶುಕ್ರವಾರ · ಪಾಸ್ಕ ಕಾಲದ ಏಳನೆಯ ವಾರ

ಹಬ್ಬಗಳು ಮತ್ತು ಸಂತರು

ಸಂತ ಮತ್ತೀಯ, ಅಪೊಸ್ತಲ

ಹಬ್ಬ · ಆರಾಧನಾ ಬಣ್ಣ: ಕೆಂಪು

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 1:15–17, 20–26

15ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು, 16“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು. 17ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.” 20ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ. 21ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು 23ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ, 24“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು. 26ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

ಪ್ರತಿವಚನ ಕೀರ್ತನೆ

ಕೀರ್ತ 113:1–8

1ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ. 2ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ. 3ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ. 4ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ. 5ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ, 6ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ. 7ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. 8ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.

ಸುವಾರ್ತೆ

ಯೋಹಾ 15:9–17

9“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ. 10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. 11ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ. 12ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ. 13ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ. 14ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು. 15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ. 16ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು. 17ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು