Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 14 ಮೇ

ಆರ್ಥೊಡಾಕ್ಸ್ ಪಂಚಾಂಗ · ಮೇ 1 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 14 ಮೇ 2027

ಶುಕ್ರವಾರ · ಪಾಸ್ಕದ ಎರಡನೆಯ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Prophet Jeremiah (6th C BC)

ಉಪವಾಸದ ದಿನ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 5:1–11

1ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ 2ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು. 3ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ? 4ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು. 5ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು. 6ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು. 7ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು. 8ಪೇತ್ರನು ಆಕೆಯನ್ನು ನೋಡಿ, “ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು” ಎಂದು ಕೇಳಲು ಆಕೆಯು, “ಹೌದು, ಇಷ್ಟಕ್ಕೇ” ಅಂದಳು. 9ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು. 10ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು. 11ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.

ಸುವಾರ್ತೆ

ಯೋಹಾ 5:30–6:2

30“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ. 31ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ. 32ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು. 33ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು. 34ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ. 35ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ. 36ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ. 37ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ. 38ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ. 39ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ. 40ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ. 41“ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ, 42ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ. 43ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ. 44ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ? 45ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ! 46ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ. 47ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?” ಎಂದನು. 6:1ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ. 2ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 1 ಮೇ ಎಂದರೆ ನಾಗರಿಕ ಪಂಚಾಂಗದ 14 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು