Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 15 ಮೇ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 15 ಮೇ 2027

ಶನಿವಾರ · ಪಾಸ್ಕ ಕಾಲದ ಏಳನೆಯ ವಾರ

ಹಬ್ಬಗಳು ಮತ್ತು ಸಂತರು

ಪಾಸ್ಕ ಕಾಲದ ಏಳನೆಯ ವಾರದ ಶನಿವಾರ

ವಾರದ ದಿನ · ಆರಾಧನಾ ಬಣ್ಣ: ಬಿಳಿ

ದಿನದ ವಾಚನಗಳು

ಮೊದಲನೆಯ ವಾಚನ

ಅ. ಕೃ 28:16–20, 30–31

16ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು. 17ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು. 18ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು. 19ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ. 20ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು. 30ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು. 31ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.

ಪ್ರತಿವಚನ ಕೀರ್ತನೆ

ಕೀರ್ತ 11:4–5, 7

4ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ. 5ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ. 7ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.

ಸುವಾರ್ತೆ

ಯೋಹಾ 21:20–25

20ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ. 21ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು, 22ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 23ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು. 24ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. 25ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು