Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 15 ಮೇ

ಆರ್ಥೊಡಾಕ್ಸ್ ಪಂಚಾಂಗ · ಮೇ 2 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 15 ಮೇ 2027

ಶನಿವಾರ · ಪಾಸ್ಕದ ಎರಡನೆಯ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

St. Athanasius the Great, Patriarch of Alexandria († 373)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 5:21–33

21ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು. 22ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು, 23“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು. 24ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು. 25ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು. 26ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ. 27ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ, 28“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು. 29ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ. 30ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು. 31ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು. 32ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು. 33ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.

ಸುವಾರ್ತೆ

ಯೋಹಾ 6:14–27

14ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು. 15ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು. 16ಸಂಜೆಯಾದಾಗ ಆತನ ಶಿಷ್ಯರು ಸಮುದ್ರದ ದಡಕ್ಕೆ ಬಂದು, 17ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. 18ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು. 19ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು. 20ಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು. 21ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು. 22ಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. 23ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು. 24ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು. 25ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು. 26ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ. 27ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 2 ಮೇ ಎಂದರೆ ನಾಗರಿಕ ಪಂಚಾಂಗದ 15 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು