ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 16 ಮೇ
ಆರ್ಥೊಡಾಕ್ಸ್ ಪಂಚಾಂಗ · ಮೇ 3 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 16 ಮೇ 2027
ಭಾನುವಾರ · ಸ್ವರ 2
ಹಬ್ಬಗಳು ಮತ್ತು ಸಂತರು
ಪಾಸ್ಕದ ಮೂರನೆಯ ಭಾನುವಾರ
ಸುಗಂಧದ್ರವ್ಯ ತಂದ ಸ್ತ್ರೀಯರ ಭಾನುವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಉದಯಕಾಲದ ಮೂರನೆಯ ಸುವಾರ್ತೆ
9ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು. 10ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು. 11“ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ. 12ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು. 13ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ. 14ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು. 15ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. 16ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು. 17“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; 18ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು. 19ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು. 20ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
ಪತ್ರಿಕೆ
1ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು. 2ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ. 3ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು. 4ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು. 5ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು. 6ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು. 7ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.
ಪತ್ರಿಕೆ (ಸಂತ ಥಿಯೊಡೋಸಿಯಸ್)
7ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ. 8ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು. 9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ. 10ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ. 11ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ. 12ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು. 13ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ. 14ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ. 15ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ. 16ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
ಸುವಾರ್ತೆ
43ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. 44ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು. 45ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು. 46ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು. 47ಮಗ್ದಲದ ಮರಿಯಳೂ ಮತ್ತು ಯೋಸೆಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು. 16:1ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು. 2ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು. 3“ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 4ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು. 5ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. 6ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, 7ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು. 8ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
ಸುವಾರ್ತೆ (ಸಂತ ಥಿಯೊಡೋಸಿಯಸ್)
27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. 28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 3 ಮೇ ಎಂದರೆ ನಾಗರಿಕ ಪಂಚಾಂಗದ 16 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು