Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 18 ಮೇ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 18 ಮೇ 2027

ಮಂಗಳವಾರ · ಸಾಮಾನ್ಯ ಕಾಲದ ಏಳನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಏಳನೆಯ ವಾರದ ಮಂಗಳವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಜಾನ್ I, ಪೋಪ್ ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಈ ಅನುವಾದದಲ್ಲಿ ಇಲ್ಲ

ಪ್ರತಿವಚನ ಕೀರ್ತನೆ

ಕೀರ್ತ 37:3–4, 18–19, 27–28, 39–40

3ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು. 4ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು. 18ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು. 19ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ. 27ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ. 28ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು. 39ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ. 40ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.

ಸುವಾರ್ತೆ

ಮಾರ್ಕ 9:30–37

30ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು. 31ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು. 32ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು. 33ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು. 34ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು. 35ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ, 36ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ, 37“ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು