ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 18 ಮೇ
ಆರ್ಥೊಡಾಕ್ಸ್ ಪಂಚಾಂಗ · ಮೇ 5 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 18 ಮೇ 2027
ಮಂಗಳವಾರ · ಪಾಸ್ಕದ ಮೂರನೆಯ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Great Martyr Irene of Thessalonica (1st-2nd C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
5ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು. 6ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು. 7ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು. 8ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು. 9ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು. 10ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು. 11ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು. 12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು. 13ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು. 14ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು. 15ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು. 16ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು 17ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.
ಸುವಾರ್ತೆ
27ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು. 28ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ, 29ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು. 30ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ? 31ನಮ್ಮ ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ, 32ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ. 33ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 5 ಮೇ ಎಂದರೆ ನಾಗರಿಕ ಪಂಚಾಂಗದ 18 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು