ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 19 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 19 ಮೇ 2027
ಬುಧವಾರ · ಸಾಮಾನ್ಯ ಕಾಲದ ಏಳನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಏಳನೆಯ ವಾರದ ಬುಧವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
ಕೀರ್ತ 119:165, 168, 171–172, 174–175
165ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ. 168ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. 171ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ, 172ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ, ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು. 174ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು. 175ನನ್ನ ಪ್ರಾಣವನ್ನು ಉಳಿಸು, ಅದು ನಿನ್ನನ್ನು ಕೊಂಡಾಡಲಿ. ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.
ಸುವಾರ್ತೆ
38ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು. 39ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ. 40ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು