ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 19 ಮೇ
ಆರ್ಥೊಡಾಕ್ಸ್ ಪಂಚಾಂಗ · ಮೇ 6 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 19 ಮೇ 2027
ಬುಧವಾರ · ಪಾಸ್ಕದ ಮೂರನೆಯ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Righteous Job the Long-Suffering (c.2000-1500 BC)
ಉಪವಾಸದ ದಿನ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
18ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು, 19“ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು. 20ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ? 21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ. 22ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ. 23ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು 24ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು. 25ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.
ಸುವಾರ್ತೆ
35ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ ಬಾಯಾರಿಕೆಯಾಗುವುದಿಲ್ಲ. 36ಆದರೆ ನೀವು ನನ್ನನ್ನು ನೋಡಿದ್ದರೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ. 37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ. 38ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ. 39ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 6 ಮೇ ಎಂದರೆ ನಾಗರಿಕ ಪಂಚಾಂಗದ 19 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು