ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 20 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 20 ಮೇ 2027
ಗುರುವಾರ · ಸಾಮಾನ್ಯ ಕಾಲದ ಏಳನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಏಳನೆಯ ವಾರದ ಗುರುವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಿಯೆನಾದ ಸಂತ ಬರ್ನಾರ್ಡಿನ್, ಧರ್ಮಗುರು · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, 2ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. 3ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. 4ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. 6ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
ಸುವಾರ್ತೆ
41ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ. 42ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ. 43ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. 45ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. 47ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. 48ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ. 49“ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು. 50ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”
ಇಂದಿನ ಸಂತರು
- ಸಿಯೆನಾದ ಸಂತ ಬರ್ನಾರ್ಡಿನ್, ಧರ್ಮಗುರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು