ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 20 ಮೇ
ಆರ್ಥೊಡಾಕ್ಸ್ ಪಂಚಾಂಗ · ಮೇ 7 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 20 ಮೇ 2027
ಗುರುವಾರ · ಪಾಸ್ಕದ ಮೂರನೆಯ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Commemoration of the Apparition of the Sign of the Precious Cross Over Jerusalem in 351 AD
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
26ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು. 27ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು. 28ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು. 29ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು. 30ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು. 31ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು. 32ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು. 33ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ. 34ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು 35ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು. 36ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು. 37ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು; 38ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. 39ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
ಸುವಾರ್ತೆ
40ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು. 41ಆತನು, “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ” ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ, 42“ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು. 43ಅದಕ್ಕೆ ಯೇಸು ಅವರಿಗೆ, “ನಿಮ್ಮ ನಿಮ್ಮೊಳಗೆ ಗೊಣಗುಟ್ಟುವುದನ್ನು ನಿಲ್ಲಿಸಿರಿ” ಎಂದು ಉತ್ತರ ಕೊಟ್ಟನು. 44“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 7 ಮೇ ಎಂದರೆ ನಾಗರಿಕ ಪಂಚಾಂಗದ 20 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು