ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 21 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ಮೇ 2027
ಶುಕ್ರವಾರ · ಸಾಮಾನ್ಯ ಕಾಲದ ಏಳನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಏಳನೆಯ ವಾರದ ಶುಕ್ರವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತ ಕ್ರಿಸ್ಟೋಫರ್ ಮಗಲ್ಯಾನೆಸ್, ಧರ್ಮಗುರು, ಮತ್ತು ಸಂಗಡಿಗರು, ಹುತಾತ್ಮರು · ಐಚ್ಛಿಕ ಸ್ಮರಣೆ
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
ಕೀರ್ತ 119:12, 16, 18, 27, 34–35
12ಸ್ತುತಿಪಾತ್ರನಾದ ಯೆಹೋವನೇ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು. 16ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು, ನಿನ್ನ ವಾಕ್ಯವನ್ನು ಮರೆಯುವುದಿಲ್ಲ. 18ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು. 27ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು, ಆಗ ನಿನ್ನ ಬೋಧನೆಗಳನ್ನು ಧ್ಯಾನಿಸುವೆನು. 34ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು. 35ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು, ಅದೇ ನನ್ನ ಇಷ್ಟ.
ಸುವಾರ್ತೆ
1ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು. 2ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು. 3ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು. 4ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು. 5ಆದರೆ ಯೇಸು ಅವರಿಗೆ, “ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು. 6ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು. 7ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. 8ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. 9ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು. 10ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು. 11ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ; 12ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು.
ಇಂದಿನ ಸಂತರು
- ಸಂತ ಕ್ರಿಸ್ಟೋಫರ್ ಮಗಲ್ಯಾನೆಸ್, ಧರ್ಮಗುರು, ಮತ್ತು ಸಂಗಡಿಗರು, ಹುತಾತ್ಮರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು