ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 22 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 22 ಮೇ 2027
ಶನಿವಾರ · ಸಾಮಾನ್ಯ ಕಾಲದ ಏಳನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಏಳನೆಯ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಕಾಸ್ಕಿಯಾದ ಸಂತ ರೀಟಾ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
13ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ. 14ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ. 15ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ. 16ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ. 17ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ. 18ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
ಸುವಾರ್ತೆ
13ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು. 14ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ. 15ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು. 16ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
ಇಂದಿನ ಸಂತರು
- ಕಾಸ್ಕಿಯಾದ ಸಂತ ರೀಟಾ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು